ಕುಕ್ಕರ್ ಬಾಂಬ್ ಸ್ಫೋಟ ಕೇಸ್; ಎನ್ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ

ಮಂಗಳೂರಿನಲ್ಲಿ ; ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಹಸ್ತಾಂತರಿಸಿದ್ದಾರೆ. ಎನ್ಐಎ ಅಧಿಕಾರಿಗಳ ತನಿಖೆ ಇಂದಿನಿಂದ ಆರಂಭವಾಗಲಿದೆ. ಈಗಾಗಲೇ ಪೊಲೀಸರು ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ತನಿಖಾಧಿಕಾರಿ ಪಿ.ಎ.ಹೆಗ್ಡೆ ನೇತೃತ್ವದಲ್ಲೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.