ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ

ಮಂಗಳೂರು: ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸ್ಥಳ ಪರಿಶೀಲನೆ ಬಳಿಕ ಗೃಹ ಸಚಿವರು ಸ್ಪೋಟ ಪ್ರಕರಣದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯ ವಿಚಾರಿಸಲಿದ್ದಾರೆ. ನಂತರ ಸ್ಪೋಟ ಪ್ರಕರಣದ ಆರೋಪಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರಿಕ್‌ನ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.