ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ 'ಕೇಂದ್ರ ಸಚಿವೆ ಸ್ಮೃತಿ ಇರಾನಿ' ಭೇಟಿ : ವಿಶೇಷ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ 'ಕೇಂದ್ರ ಸಚಿವೆ ಸ್ಮೃತಿ ಇರಾನಿ' ಭೇಟಿ : ವಿಶೇಷ ಪೂಜೆ ಸಲ್ಲಿಕೆ

ಕ್ಷಿಣಕನ್ನಡ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಇಂದು ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು ದೇವರ ದರ್ಶನದ ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ನೆರವೇರಿಸಿದರು.ಬಳಿಕ ಕಿರುಷಷ್ಠಿ ಸಭಾಭವನದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಮಧ್ಯಾಹ್ನ ಪೂಜೆಯಲ್ಲಿ ಭಾಗವಹಿಸಿ ಬಳಿಕ ತೆರಳಿದರುದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ, ಪಿ.ಜಿ.ಎಸ್.ಎನ್. ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್‍, ವನಜಾ ಭಟ್, ಲೋಕೇಶ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಮೊದಲಾದವರು ಈ ವೇಳೆ ಹಾಜರಿದ್ದರು.