ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತು ಸರ್ಕಾರದ ಗಮನ ಸೆಳೆಯಲು ಮಾರ್ಚ್ 3 ರಿಂದ ಪಾದಯಾತ್ರೆ ನಡೆಸುವುದಾಗಿ ಪರಿಸರ ಹೋರಾಟಗಾರ ಆಂಜನೇಯ ರೆಡ್ಡಿ ತಿಳಿಸಿದ್ದಾರೆ. 300 ಕಿ.ಮೀ ಯಾತ್ರೆ ಮಾರ್ಚ್ 12ರಂದು ಕೋಲಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು. ಬೆಂಗಳೂರು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತು ಸರ್ಕಾರದ ಗಮನ ಸೆಳೆಯಲು ಮಾರ್ಚ್ 3 ರಿಂದ ಪಾದಯಾತ್ರೆ ನಡೆಸುವುದಾಗಿ ಪರಿಸರ ಹೋರಾಟಗಾರ ಆಂಜನೇಯ ರೆಡ್ಡಿ ತಿಳಿಸಿದ್ದಾರೆ. 300 ಕಿ.ಮೀ ಯಾತ್ರೆ ಮಾರ್ಚ್ 12ರಂದು ಕೋಲಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ ಶಾಶ್ವತ ನೀರವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ, ಈ ಮೂರು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆಯನ್ನು ಕರ್ನಾಟಕದ ಯಾವುದೇ ರಾಜಕೀಯ ಪಕ್ಷಗಳು ಪರಿಹರಿಸಿಲ್ಲ ಎಂದು ಆರೋಪಿಸಿದರು. ಕುಡಿಯುವ ನೀರಿನ ಸಮಸ್ಯೆಯನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸುವಂತೆ ರಾಜಕೀಯ ಮುಖಂಡರ ಮೇಲೆ ಒತ್ತಡ ಹೇರಲು ಈ ಭಾಗಗಳ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಅವರು ಹೇಳಿದರು. ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಕೃಷಿ ಹೊಲಗಳಿಗೆ ನೀರು ನೀಡುವುದು ನಮ್ಮ ಒಂದು ಪಾಯಿಂಟ್ ಅಜೆಂಡಾವಾಗಿದೆ ಎಂದು ಹೇಳಿದರು. ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಮುಖ್ಯ ಮೂಲವೆಂದರೆ ಬೋರ್ವೆಲ್ನ ಅಂತರ್ಜಲ ಆದರೆ ಅದು ಕುಡಿಯಲು ಸುರಕ್ಷಿತವಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ 2012 ರಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ.ಎತ್ತಿನಹೊಳೆ ಯೋಜನೆಯ ಪ್ರಾಥಮಿಕ ವರದಿಯು ದೋಷಪೂರಿತವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುವುದು ಎಂದು 2012 ರಲ್ಲಿ ಕೇಂದ್ರ ಜಲ ಆಯೋಗ ಹೇಳಿದೆ. ಕೆಸಿ ವ್ಯಾಲಿ ಮತ್ತು ಎಚ್ಎನ್ ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಬಿಡಲಾಗುತ್ತಿದ್ದು, ಜನ ಮತ್ತು ಜಾನುವಾರುಗಳಿಗೆ ಕ್ಯಾನ್ಸರ್ ಮತ್ತು ಕಿಡ್ನಿ ರೋಗಗಳಿಗೆ ಕಾರಣವಾಗುತ್ತಿದೆ ಎಂದು ಮತ್ತೊಂದು ವರದಿ ತಿಳಿಸಿದೆ ಎಂದು ಆಂಜನೇಯ ರೆಡ್ಡಿ ಹೇಳಿದರು.