ಕೃಷಿ ಇಲಾಖೆಯಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕೃಷಿ ಇಲಾಖೆ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಖಾಲಿ ಇವೆ. ಕೃಷಿ ಪದವೀಧರರು & ಬಿ.ಟೆಕ್ ಕೃಷಿ ಎಂಜಿನಿಯರಿಂಗ್/ ಬಯೋಟೆಕ್ನಾಲಜಿ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹರು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಸ್ಪರ್ಧಾತ್ಮಕ ಪರೀಕ್ಷೆಯ ಆಯ್ಕೆ ವಿಧಾನ ಅನುಸರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ.