'ಕೆಂಪೇಗೌಡ' ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎನ್ನುವುದಾದರೆ 'HDK' ಧರ್ಮಸ್ಥಳಕ್ಕೆ ಬಂದು 'ಆಣೆ' ಮಾಡಲಿ : ಬಿಜೆಪಿ ಸವಾಲ್

'ಕೆಂಪೇಗೌಡ' ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎನ್ನುವುದಾದರೆ 'HDK' ಧರ್ಮಸ್ಥಳಕ್ಕೆ ಬಂದು 'ಆಣೆ' ಮಾಡಲಿ : ಬಿಜೆಪಿ ಸವಾಲ್

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರಿಗೆ ದೂರವಾಣಿ ಕರೆ ಮಾಡಿ 'ಕೆಂಪೇಗೌಡ' ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎನ್ನುವುದಾದರೆ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಬಿಜೆಪಿ ಸವಾಲ್ ಹಾಕಿದೆ.

ಅಶ್ವತ್ಥ್ ನಾರಾಯಣ್ ಹಾಗೂ ಆರ್. ಅಶೋಕ್ ಅವರನ್ನು ಹೋಗಿ ದೇವೇಗೌಡರಿಗೆ ಆಹ್ವಾನ ನೀಡಿದೆ. ಇಷ್ಟಾದರೂ ಜೆಡಿಎಸ್ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದರು.ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಎನ್ನುವುದಾದರೆ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ. ದೇವೇಗೌಡರೇ ಈ ಬಗ್ಗೆ ಹೇಳಿಕೆ ನೀಡಲಿ. ಅದು ಬಿಟ್ಟು ಚುನಾವಣಾ ಸಂದರ್ಭವನ್ನು ಬಳಸಿಕೊಂಡಿರುವ ಜೆಡಿಎಸ್ ರಾಜಕೀಯದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ ಎಂದು ವಾಗ್ಧಾಳಿ ನಡೆಸಿದೆ.

ಹಿರಿಯ ಮುತ್ಸದ್ದಿ ರಾಜಕಾರಣಿ ದೇವೇಗೌಡರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತಾರೆ. JDS ವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಮೂಲಕ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದೆ.