ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಭೂಮಿ ಪೂಜೆ

ಬೆಂಗಳೂರು : ವಿಧಾನಸೌಧದ ಮುಂಭಾಗ ಇಂದು ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಸವಣ್ಣ, ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾನ್ ನಾಯಕರ ಪುತ್ಥಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ವಿಧಾನಸೌಧದ ಮುಂಭಾಗ 24 ಅಡಿ ಎತ್ತರದ ಬಸವಣ್ಣ ಮತ್ತು ಕೆಂಪೇಗೌಡ ಪುತ್ಥಳಿಗಳನ್ನು 8 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರತಿಮೆಗಳಿವೆ. ಇವೆರಡು ಪ್ರತಿಮೆಗಳ ನಡುವೆ ಬಸವಣ್ಣ ಮತ್ತು ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲಿವೆ.