ಕೆಂಪೇಗೌಡ: ಮೃತ್ತಿಕಾ (ಮಣ್ಣು) ಸಂಗ್ರಹ ಅಭಿಯಾನಕ್ಕೆ ದೇವೇಗೌಡರಿಗೆ ಆಹ್ವಾನ ನೀಡಿದ ಸಚಿವ ಅಶ್ವತ್ಥನಾರಾಯಣ

ಕೆಂಪೇಗೌಡ: ಮೃತ್ತಿಕಾ (ಮಣ್ಣು) ಸಂಗ್ರಹ ಅಭಿಯಾನಕ್ಕೆ ದೇವೇಗೌಡರಿಗೆ ಆಹ್ವಾನ ನೀಡಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಇದಕ್ಕೆ ಪೂರ್ವಭಾವಿಯಾಗಿ ಇದೇ 21ರಂದು ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರ್ಕಾರದ ಪರವಾಗಿ ಆಮಂತ್ರಿಸಿದರು.

ಮಾಜಿ ಪ್ರಧಾನಿಗಳನ್ನು ಪದ್ಮನಾಭ ನಗರದ ನಿವಾಸದಲ್ಲಿ ಬುಧವಾರ ಭೇಟಿಯಾದ ಸಚಿವರು ಗೌಡರ ಯೋಗಕ್ಷೇಮವನ್ನೂ ವಿಚಾರಿಸಿದರು. ಬೇಗ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಮಾತುಕತೆ ವೇಳೆ ಸಚಿವರು, ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಇಡೀ ಯೋಜನೆಯ ರೂಪುರೇಷೆಗಳನ್ನು ಗೌಡರಿಗೆ ವಿವರಿಸಿದರು.