ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರ ಆಹ್ವಾನಿಸಿಲ್ಲ' : ಬಿಜೆಪಿ ವಿರುದ್ಧ JDS ಸರಣಿ ಟ್ವೀಟ್‌ ಮಾಡಿ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರ ಆಹ್ವಾನಿಸಿಲ್ಲ' : ಬಿಜೆಪಿ ವಿರುದ್ಧ JDS ಸರಣಿ ಟ್ವೀಟ್‌ ಮಾಡಿ ಆಕ್ರೋಶ

ಬೆಂಗಳೂರು: ಬಿಜೆಪಿ, ನರೇಂದ್ರ ಮೋದಿ ಒಕ್ಕಲಿಗರ ಕಾರ್ಡ್ ಪ್ಲೇಗೆ ಜೆಡಿಎಸ್(JDS) ಈಗ ದೇವೇಗೌಡರಎಮೋಷನಲ್ ಕಾರ್ಡ್ ಪ್ಲೇ ಮಾಡಿದೆ.ಕೆಂಪೇಗೌಡರ ಪ್ರತಿಮೆವರಣಕ್ಕೆ ದೇವೇಗೌಡರ ಆಹ್ವಾನ ಮಾಡಿಲ್ಲ ಎಂಬುದನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ನಿರ್ಧಾರ ಮಾಡಿದೆ. ಪ್ರತಿಮೆ ಶಂಕು ಸ್ಥಾಪನೆಗೆ ಕರೆದು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ್ದಕ್ಕೆ ಬಿಜೆಪಿ ವಿರುದ್ಧ ಸರಣಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ ಯಾಕೆ?

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾ