ಕೆ.ಎಚ್.ಮುನಿಯಪ್ಪಗೆ ಟಿಕೆಟ್ ಘೋಷಣೆ ಸಾಧ್ಯತೆ ಹಿನ್ನೆಲೆ; ಕಾಂಗ್ರೆಸ್ನಿಂದ ಸಾಮೂಹಿಕ ರಾಜೀನಾಮೆ ಪರ್ವ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಕೆ.ಎಚ್.ಮುನಿಯಪ್ಪಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಮುಖಂಡರ ಒತ್ತಾಯ ಮಾಡುವುದರ ಜತೆಗೆ ದೇವನಹಳ್ಳಿ ಕಾಂಗ್ರೆಸ್ನಿಂದ ಸಾಮೂಹಿಕ ರಾಜೀನಾಮೆ ಪರ್ವ ಶುರುವಾಗಿದೆ.
ದೇವನಹಳ್ಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರೆಲ್ಲರೂ ಸೇರಿ ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದು, ಸಾಮೂಹಿಕ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕೈ ನಾಯಕರಿಗೆ ರವಾನೆ ಮಾಡಿದ್ದಾರೆ.
ಕೆ.ಎಚ್ ಮುನಿಯಪ್ಪಗೆ ಟಿಕೆಟ್ ನೀಡಿದಲ್ಲಿ ಕ್ಷೇತ್ರದಲ್ಲಿ ಪಕ್ಷ ಸೋಲುತ್ತದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಸ್ಥಳೀಯರಿಗೆ ನೀಡುವಂತೆ ಸ್ಥಳೀಯ ಮುಖಂಡರು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಪುರಸಭೆ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರಿಂದ ಒಮ್ಮತದ ನಿರ್ಧಾರ ಮಾಡಿದ್ದಾರೆ.
ಕೆಹೆಚ್ಗೆ ಟಿಕೆಟ್ ನೀಡಿದ್ದಲ್ಲಿ ಎಡಗೈ ಸಮುದಾಯದ ಮತ ಚದುರುವ ಸಾಧ್ಯತೆ ಹಿನ್ನೆಲೆ ಇದೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದೆ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಳೆದ ಹಲವು ವರ್ಷಗಳಿಂದ ಸ್ಥಳೀಯರು ಟಿಕೆಟ್ ಆಕಾಂಕ್ಷಿಗಳಾಗಿ ಕೆಲಸ ಮಾಡಿದ್ದು, ಅವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.