ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ ₹ 2.50 ಕೋಟಿ ಮೊತ್ತದ ಚೆಕ್‌ ಅನ್ನು ವಸತಿ ಸಚಿವ ವಿ. ಸೋಮಣ್ಣ ಮತ್ತು ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಕೆ.

ಬೆಲ್ದಾಳೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ.ಕೆ. ಸುಧಾಕರ್‌ ಮತ್ತು ಮುನಿರತ್ನ, ಮೂಲಸೌಕರ್ಯ ಅಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಎಸ್‌ಐಐಡಿಸಿ ಮಂಡಳಿಯ ನಿರ್ದೇಶಕರಾದ ಸಿ.ಎನ್‌. ಗಾಯತ್ರಿ ದೇವಿ, ಮಹದೇವಸ್ವಾಮಿ, ಭಾರತಿ ಮಲ್ಲಿಕಾರ್ಜುನಪ್ಪ ಅಳವಂಡಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್‌. ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ್ ಇದ್ದರು.