ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದುಬೈಗೆ ತೆರಳಲು ಕೋರ್ಟ್ ಅನುಮತಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದುಬೈಗೆ ತೆರಳಲು ಕೋರ್ಟ್ ಅನುಮತಿ

ವದೆಹಲಿ: ಡಿಸೆಂಬರ್ 1 ರಿಂದ 8ರವರೆಗೆ ದುಬೈಗೆ ತೆರಳೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ, ಶಾಸಕರು, ಸಂಸದರ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ಈ ಸಂಬಂಧ ಸಂಸದ, ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ವಿಕಾಸ್ ಧುಲ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಡಿ.ಕೆ ಶಿವಕುಮಾರ್ ಅವರು ಡಿಸೆಂಬರ್ 1 ರಿಂದ 8ರವರೆಗೆ ದುಬೈಗೆ ತೆರಳೋದಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದ್ದಾರೆ.ಅಂದಹಾಗೇ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವಂತ ಡಿ.ಕೆ ಶಿವಕುಮಾರ್ ದುಬೈಗೆ ತೆರಳೋದಕ್ಕೆ ಸಲ್ಲಿಸಲಾಗಿದ್ದಂತ ಅರ್ಜಿಗೆ ಇಡಿ ಅಧಿಕಾರಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈ ನಡುವೆಯೂ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಅನುಮತಿಯನ್ನು ನೀಡಿದೆ.