ಕೆಲ ಶಾಸಕರು ವೇಶ್ಯೆಯರಂತೆ ಮಾರಿಕೊಂಡಿದ್ದರಿಂದ ಬಿಜೆಪಿಗೆ ಅಧಿಕಾರ

ಹೊಸಪೇಟೆ: ಕಾಂಗ್ರೆಸ್‌ನ ಪ್ರಜಾಧ್ವನಿ ಸಮಾವೇಶದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ನಾಲಿಗೆ ಹರಿಬಿಟ್ಟಿದ್ದು, ಕಾಂಗ್ರೆಸ್‌ನಿಂದ ಗೆದ್ದು ಪಕ್ಷಾಂತರ ಮಾಡಿ ಬಿಜೆಪಿ ಸರ್ಕಾರ ರಚನೆಗೆ ಕೈ ಜೋಡಿಸಿದ ಶಾಸಕರನ್ನು ವೇಶ್ಯೆಯರಿಗೆ ಹೋಲಿಸಿ ವಿವಾದ ಹುಟ್ಟು ಹಾಕಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಅವರು, 2018ರಲ್ಲಿ ರಾಜ್ಯದ ಜನ ಬಿಜೆಪಿ ಸರ್ಕಾರವನ್ನು ತಿರಸ್ಕಾರ ಮಾಡಿದ್ದರು. ಆದರೆ ಕೆಲವರು ವೇಶ್ಯೆಯ ಮಾದರಿಯಲ್ಲಿ ತಮ್ಮ ಸ್ಥಾನಗಳನ್ನು ಮಾರಾಟ ಮಾಡಿಕೊಂಡು ಬಿಜೆಪಿ ಸರ್ಕಾರ ರಚನೆಗೆ ಕಾರಣರಾದರು.
ನಾವು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡಿದ್ದೆವು. ವೇಶ್ಯೆಯರು ತಮ್ಮ ಹೊಟ್ಟೆಪಾಡಿಗಾಗಿ ತಮ್ಮನ್ನು ಮಾರಿಕೊಂಡಂತೆ ಕೆಲ ಶಾಸಕರು ತಮ್ಮ ಸ್ಥಾನಗಳನ್ನು ಮಾರಾಟ ಮಾಡಿಕೊಂಡರು.
ಇದರಿಂದಾಗಿ ಬಿಜೆಪಿ ಅಧಿಕಾರಕ್ಕೆ ಬಂತು. ಇಂತಹ ಕಾರ್ಯ ಮಾಡಿದ ಇವರಿಗೆ ರಾಜ್ಯದ ಜನ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.