ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಕೆಲವೇ ಕ್ಷಣಗಳಲ್ಲಿ ಅಧಿವೇಶನ ಉದ್ದೇಶಿಸಿ ಭಾಷಣ

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಕೆಲವೇ ಕ್ಷಣಗಳಲ್ಲಿ ಅಧಿವೇಶನ ಉದ್ದೇಶಿಸಿ ಭಾಷಣ

ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣದ ಮೇಲೆ ಸೋಮವಾರದಿಂದ ಚರ್ಚೆಗಳು ನಡೆಯಲಿದೆ.

ಇದೀಗ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಸಿಎಂ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಾಗತ ಕೋರಿದ್ದಾರೆ.

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಕೆಲವೇ ಕ್ಷಣದಲ್ಲಿ ಭಾಷಣ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನಗಳ ಸದಸ್ಯರನ್ನುದೇಶಿಸಿ ಭಾಷಣ ಮಾಡಲಿದ್ದಾರೆ.ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ರಾಜ್ಯದ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.