ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ನಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ನಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ಏರೋ ಇಂಡಿಯಾ 2023ರ ( Aero India 2023 ) ಉದ್ಘಾಟನೆಯನ್ನು ನಾಳೆ ಮಾಡೋದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಅವರ ಆಗಮನದ ಹಿನ್ನಲೆಯಲ್ಲಿ ನಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ( Prathap Reddy ) ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿಗೆ ಪ್ರಧಾನಿ ಮೋದಿ 7.40ಕ್ಕೆ ಹೆಎಎಲ್ ವಿಮಾನ ನಿಲ್ದಾಣಕ್ಕೆ ( HAL Airport ) ಆಗಮಿಸಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು, 15 ಡಿಸಿಪಿ, 30 ಎಸಿಪಿ, 15 ಇನ್ಸ್ ಪೆಕ್ಟರ್, 480 ಸಬ್ ಇನ್ಸ್ ಪೆಕ್ಟರ್, 40 ಕೆ ಎಸ್ ಆರ್ ಪಿ ತುಕಡಿ, 10 ಸಿಎಎರ್ ತುಕಡಿ, 5 ಸಾವಿರಕ್ಕೂ ಹೆಚ್ಚು ಪೊಲೀಸ್ ನಿಯೋಜಿಸಲಾಗಿದೆ.

ದೆಹಲಿಯಿಂದ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ 7.40ಕ್ಕೆ ಇಂದು ಸಂಜೆ ಮೋದಿ ಆಗಮಿಸಲಿದ್ದು, ಅಲ್ಲಿಂದ ರಾಜಭವನಕ್ಕೆ ತೆರಳಲಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲೂ ಪೊಲೀಸ್ ಹೈ ಸೆಕ್ಯೂರಿಟಿ ಕೈಗೊಳ್ಳಲಾಗಿದೆ.