ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ - ಸಚಿವ ಕೆ.ಗೋಪಾಲಯ್ಯ
ಮಂಡ್ಯ: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಕ್ಕೆ ಆಗಮಿಸಿದ್ದಾರೆ. ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು, ನಾಳಿನ ಅವರ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಆ ರೀತಿಯ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿರುವಂತ ಅವರು, ಕೇಂದ್ರ ಗೃಹ ಸಚಿವರ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಗದಿಯಂತೆ ಮಂಡ್ಯ, ಬೆಂಗಳೂರಿನಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಮಂಡ್ಯದ ಎಲ್ಲಾ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿವೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಕಾರ್ಯಕ್ರಮದ ಬಳಿಕ, ಜನಸಂಕಲ್ಪ ಸಮಾವೇಶದಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳುವುದಾಗಿ ತಿಳಿಸಿದರು.