ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ

ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತ

ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ಭಾನುವಾರ ಸಂಭವಿಸಿದ್ದು, ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಕೇಂದ್ರ ಸಚಿವರು ಅಶ್ವಿನಿ ಚೌಬೆ ಅವರು ಭಾನುವಾರ ಬೆಳಗ್ಗೆ ಬಕ್ಸರ್ ನಿಂದ ಪಾಟ್ನಾಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಬೆಂಗಾವಲು ವಾಹನ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಗಾಯಗೊಂಡ ಪೊಲೀಸರು ಮತ್ತು ಕಾರಿನ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಲಾಗಿದೆ ಎಂದು ವರದಿಯಾಗಿದೆ.vv