ಕೇಂದ್ರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ' : ಸಿಎಂ ಬೊಮ್ಮಾಯಿ

ಕೇಂದ್ರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ' : ಸಿಎಂ ಬೊಮ್ಮಾಯಿ

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಬಜೆಟ್ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಭಾರತ ದೇಶದ ಆರ್ಥಿಕ ಸ್ಥಿತಿ ಚೆನ್ನಾಗಿದೆ.

ಬಹಳಷ್ಟು ಕಡೆ ಆರ್ಥಿಕ ಸಂಕಷ್ಟ ಇದೆ . ಬೇರೆ ದೇಶಕ್ಕೆ ಹೋಲಿಸಿದರೆ ನಮ್ಮ ದೇಶದ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಮೋದಿ ಕಳೆದ 8 ವರ್ಷ ಹಲವು ಫಂಡಮೆಂಟಲ್ ಕರೆಕ್ಷನ್ ಮಾಡಿದ್ದಾರೆ. ಒಟ್ಟಾರೆ ಜಿಡಿಪಿ ಆರೋಗ್ಯಕರವಾಗಿದೆ ಎಂದಿದ್ದಾರೆ.

ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ಮೀಸಲು ಇಡಲಾಗಿದೆ. ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಡಲಾಗಿದೆ ಎಂದರು. ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಬದ್ದವಾಗಿದೆ. ಕೇಂದ್ರ ಸರ್ಕಾರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.ನಗರ ಗ್ರಾಮಾಂತರ ಪ್ರದೇಶದಲ್ಲಿ ಮೂಲಸೌಲಭ್ಯಕ್ಕೆ ಒತ್ತು ನೀಡಲಾಗಿದೆ. ಬಜೆಟ್ ನಲ್ಲಿ ಪ್ರಧಾನಿಗಳ ದೂರದೃಷ್ಟಿ ಇದೆ. ಕೃಷಿ, ಫೈನಾನ್ಸ್, ಗ್ರಾಮೀಣ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಬಜೆಟ್ ಬಗ್ಗೆ ತಿಳಿದುಕೊಳ್ಳದೇ ಕೆಲವರು ಸುಮ್ಮನೆ ಏನೇನೋ ಮಾತನಾಡುತ್ತಿದ್ದಾರೆ ಎಂದರು.