ಕೇಂದ್ರೀಕೃತ ಕೈಗಾರಿಕಾ ತಪಾಸಣೆ ವ್ಯವಸ್ಥೆಯಲ್ಲಿ ರಾಜ್ಯಕ್ಕೆ 'ಚಿನ್ನ'ದ ಪದಕ
ಬೆಂಗಳೂರು, ಅಕ್ಟೋಬರ್ 27: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್ ಅವಾರ್ಡ್ನಲ್ಲಿ ಚಿನ್ನವನ್ನು ಪಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
"ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಶ್ರೇಯಾಂಕ ಪಟ್ಟಿಯಲ್ಲಿ "ಟಾಪ್ ಅಚೀವರ್" ಆಗಿ ಹೊರಹೊಮ್ಮಿದೆ. ಇದೀಗ ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ 'ಸ್ಕಾಚ್ ಅವಾರ್ಡ್ಸ್ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ," ಎಂದು ಸಂತಸ ವ್ಯಕ್ತಪಡಿಸಿದ್ದಾರೆ.