ಇಂದಿನಿಂದ 'ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯ ' : ಕೇರಳ ಸರ್ಕಾರ ಆದೇಶ
ಕೇರಳ : ಇಂದಿನಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಕೇರಳ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳ, ಬಸ್ಸು, ವಾಹನಗಳಲ್ಲಿ ಸಂಚಾರಿಸುವಾಗ, ಕೆಲಸದ ಸ್ಥಳಗಳಲ್ಲಿ ಮತ್ತು ಸಮಾರಂಭ ಕೂಟಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಪಿಇಒಪಿಗೆ ನಿರ್ದೇಶನ ನೀಡಿದೆ.
ಸರ್ಕಾರವು ಅಂಗಡಿಗಳು, ಚಿತ್ರಮಂದಿರಗಳು ಮತ್ತು ಈವೆಂಟ್ ಗಳ ಆಯೋಜಕರಿಗೆ ಸ್ಯಾನಿಟೈಸರ್ ಇಡಲು ಸಜ್ಜುಗೊಳಿಸುವಂತೆ ನಿರ್ದೇಶಿಸಿದೆ. ಕೋವಿಡ್ ಉಲ್ಬಣದ ಆತಂಕದ ಮಧ್ಯೆ ಹೊರಡಿಸಲಾದ ಈ ಆದೇಶದ ಬಗ್ಗೆ ಕೋವೀಡ್ ಬಗ್ಗೆ ಯಾವುದೇ ಭಯ ಪಡಬೇಕಾಗಿಲ್ಲ. ಕೋರೊನಾ ಮುಂಜಾಗೃತ ಕ್ರಮವಾಗಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮುಂದಿನ 30 ದಿನಗಳವರೆಗೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಜಾರಿಯಲ್ಲಿರುತ್ತದೆ.
ಸೋಮವಾರ, ಭಾರತವು 114 ಹೊಸ ಕರೋನವೈರಸ್ ಸೋಂಕುಗಳನ್ನು ದಾಖಲಿಸಿದೆ, ಆದರೆ ಸಕ್ರಿಯ ಪ್ರಕರಣಗಳು 2,119 ಕ್ಕೆ ಇಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣವು ಶೇಕಡಾ 98.80 ಕ್ಕೆ ಏರಿದೆ.
ಯುಎಸ್ನಲ್ಲಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ ಎಕ್ಸ್ಬಿಬಿ.1.5 ರೂಪಾಂತರದ ಪ್ರಕರಣಗಳ ಸಂಖ್ಯೆ ಭಾರತದಲ್ಲಿ 26 ಕ್ಕೆ ಏರಿದೆ ಎಂದು ಭಾರತೀಯ ಸಾರ್ಸ್-ಕೋವ್-2 ಜೆನೋಮಿಕ್ಸ್ ಕನ್ಸೋರ್ಟಿಯಂ ದತ್ತಾಂಶ ತಿಳಿಸಿದೆ.
ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಕ್ಸ್ಬಿಬಿ.1.5 ರೂಪಾಂತರದ ಪ್ರಕರಣಗಳು ಕಂಡುಬಂದಿವೆ.