ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ರವಾನೆ

ಬೆಂಗಳೂರು: ಮಾಜಿ ಸಿಎಂ ಉಮ್ಮನ್ ಚಾಂಡಿ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಿರುವನಂತಪುರಂನಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಮ್ಮನ್ ಚಾಂಡಿ ಅವರಿಗೆ ನ್ಯುಮೋನಿಯಾ ಸೋಂಕಿನಿಂದ ಬಳಲುತ್ತಿದ್ದರು. ಈಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅವರನ್ನು ತಿರುವನಂತಪುರಂನ ನೇಯ್ಯಟ್ಟಿನಕರ ಎಂಬಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಉಮ್ಮನ್ ಚಾಂಡಿ ಅವರಿಗೆ ಆರೋಗ್ಯ ಪರಿಸ್ಥಿತಿ ಗಂಭೀರವಾದ್ದರಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಇನ್ನು ಉಮ್ಮನ್ ಚಾಂಡಿ ಅವರಿಗೆ ಆರೋಗ್ಯ ಪರಿಸ್ಥಿತಿ ಗಂಭೀರವಾದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂಬಂತಹ ಸುದ್ದಿ ಇತ್ತು.
ಆದರೆ, ಸ್ವತಃ ಉಮ್ಮನ್ ಚಾಂಡಿಯವರೇ ಈ ಸುದ್ದಿಗಳನ್ನು ಅಲ್ಲಗಳೆದಿದ್ದು, ತಮ್ಮ ಆರೋಗ್ಯ ಗಂಭೀರ ಸ್ಥಿತಿ ತಲುಪಿಲ್ಲ ಎಂದಿದ್ದಾರೆ.ಉಮ್ಮನ್ ಚಾಂಡಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವ ನಿರ್ಧಾರ ಕೈಗೊಂಡಿದ್ದು ಕಾಂಗ್ರೆಸ್ ಪಕ್ಷ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.