ಕೊಚ್ಚಿ: ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿಕೆ

ಕೊಚ್ಚಿ: ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿಕೆ

ಕೊಚ್ಚಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 5ರಂದು ಕೇರಳದ ತ್ರಿಶೂರ್ ಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ.

ಅಮಿತ್ ಶಾ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಸಂಬಂಧ ಮಾತುಕತೆಯಲ್ಲಿ ತೊಡಗಿಸಿಕೊಂಡಿರುವುದನ್ನು ಗಮನಿಸಬಹುದು.

ಈ ಹಿನ್ನಲೆಯಲ್ಲಿ ಭೇಟಿ ರದ್ದಾಗಿದೆ ಎಂದು ತಿಳಿದುಬಂದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ನಟ ಸುರೇಶ್‌ ಗೋಪಿ ಅವರ ಸತತ ಪರಿಶ್ರಮದ ಪರಿಣಾಮ ತ್ರಿಶೂರ್‌ ಬಿಜೆಪಿಯ ಭದ್ರಕೋಟೆಯಾಗಿ ಪರಿವರ್ತನೆಯಾಗಿದೆ. ಅಮಿತ್ ಶಾ ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ತಿಳಿಸಿದೆ.