ಕೊಪ್ಪಳ ಜಿಲ್ಲೆಯಲ್ಲಿ ಬರೊಬ್ಬರಿ 10 ಮಂದಿಗೆ ಹುಚ್ಚುನಾಯಿ ಕಡಿತ
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾ| ರಂಗಾಪುರ ಗ್ರಾಮದಲ್ಲಿ ಒಂದೇ ದಿನ ಮಕ್ಕಳು ಸೇರಿದಂತೆ 10 ಮಂದಿಗೆ ಹುಚ್ಚುನಾಯಿ ಕಚ್ಚಿದ ದುರಂತ ಘಟನೆ ಬೆಳಕಿಗೆ ಬಂದಿದೆ. ಗಾಯಗೊಂಡ ಸುಜಾತ ಮಲ್ಲಾಪೂರ & ಶಿವಕುಮಾರ ಮಲ್ಲಾಪೂರ ಎಂಬವರು ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಉಪಟಳ ತಪ್ಪಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.