ಕೊಪ್ಪಳದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೊಪ್ಪಳದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೊಪ್ಪಳ: ನಿಂತಿದ್ದಂತ ಲಾರಿಗೆ ಬಸ್ ಡಿಕ್ಕಿಯಾದ ಪರಿಣಾಮ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ಇಂದು ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ.

ಬಸ್ಸಿನಲ್ಲಿದ್ದಂತ 50 ಮಂದಿ ಪ್ರಯಾಣಿಕರಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ.

ಬಸ್ ಅಪಘಾತದಲ್ಲಿ ಗಾಯಗೊಂಡಂತ ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಉಂಟಾಗಿರೋ ಬಗ್ಗೆ ತಿಳಿದು ಬಂದಿಲ್ಲ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ಚಾಲಕನ ಸಮಯ ಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

ಬೆಳಗಾವಿಯ ಹತ್ತರಕಿ ಟೋಲ್ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ವೊಂದರಲ್ಲಿ ( KSRTC Bus ) ಕಾಣಿಸಿಕೊಂಡ ಬೆಂಕಿ, ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ನಡು ರಸ್ತೆಯಲ್ಲೇ ಬಸ್ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಆದ್ರೇ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಬೆಳಗಾವಿಯ ಸಂಕೇಶ್ವರ ಡಿಪೋಗೆ ಸೇರಿದಂತೆ ಬಸ್, ಸಂಕೇಶ್ವರದಿಂದ ಬೆಳಗಾವಿಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದದ್ರಿ 4ರ ಹತ್ತರಕಿ ಟೋಲ್ ಬಳಿಯಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ಚಾಲಕ ಹಾಗೂ ನಿರ್ವಾಹಕರು ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನೆಲ್ಲಾ ಕೆಳಗೆ ಇಳಿಸಿದ್ದಾರೆ.