ಕೊಯಿರಾ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕೊಯಿರಾ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು ; ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೊಯಿರಾ ಬೆಟ್ಟದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ.

ದೇವನಹಳ್ಳಿ : ತಾಲೂಕಿನ ಕೊಯಿರಾ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಬೆಟ್ಟದ ಆಸುಪಾಸಿನಲ್ಲಿರುವ ನಿವಾಸಿಗಳಿಗೆ ಆತಂಕ ಉಂಟಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಚಿರತೆಯನ್ನು ಸೆರೆ ಹಿಡಿಯುವುದರಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಚಿರತೆ ಬೆಟ್ಟದಲ್ಲಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಇತ್ತೀಚೆಗಷ್ಟೇ ಈ ಚಿರತೆಯು ಎರಡು ಕುರಿಗಳು ಮೇಲೆ ದಾಳಿ ನಡೆಸಿತ್ತು ಎನ್ನಲಾಗಿದೆ. ಇನ್ನು ಬೆಟ್ಟದ ಮೇಲೆ ಭೀಮೇಶ್ವರ ಸ್ವಾಮಿ ದೇಗುಲ ಇರುವುದರಿಂದ ಭಕ್ತರು ಬೆಟ್ಟಕ್ಕೆ ಬಂದು ಹೋಗುತ್ತಿರುತ್ತಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಬೆಟ್ಟದಲ್ಲಿರುವ ಚಿರತೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.