ಕೊರಗಜ್ಜನ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಕಬೀರ್ ಬೇಡಿ

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದ 'ಕರಿ ಹೈದ….ಕರಿ ಅಜ್ಜ …' ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಬೆಳ್ತಂಗಡಿ ಆಸುಪಾಸಿನಲ್ಲೇ ಹೆಚ್ಚು ಚಿತ್ರೀಕರಣವಾಗಿದೆ. ಶೃತಿ, ಭವ್ಯ, ಭರತ್ ಸೂರ್ಯ ಸೇರಿದಂತೆ ಆನೇಕ ಕಲಾವಿದರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.