ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರ ಕ್ರೂರತೆ ಮತ್ತು ಮನೋವಿಕಾರತೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಅದರಂತೆ, ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಬಾಲಕರನ್ನು ಗಲ್ಲಿಗೇರಿಸಲಾಗಿತ್ತು, ಈ ಸುದ್ದಿ ಕಳೆದ ವಾರ ಬೆಳಕಿಗೆ ಬಂದಿದೆ. ಬಾಲಕರು ದುಷ್ಕೃತ್ಯವೆಸಗಿದ್ದಾರೆ ಹೀಗಾಗಿ ಅವರನ್ನು ಗಲ್ಲಿಗೇರಿಸಲಾಗಿದೆ ಎಂದು ಉತ್ತರ ಕೊರಿಯಾ ನಿಲುವನ್ನು ಸಮರ್ಥಿಸಿಕೊಂಡಿದೆ.