ಕೊರೊನಾ ಆತಂಕ; ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು
ಬೆಂಗಳೂರು: ನೆರೆಯ ಚೀನಾದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಹವಾಳಿ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಇತ್ತ ವಿದೇಶದಲ್ಲಿ ಒಮಿಕ್ರಾನ್ ಉಪತಳಿಯ ಆರ್ಭಟ ಹಿನ್ನೆಲೆ ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗುತ್ತಿದೆ. ಮೂರು ಪಾಳಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯ ನಡೆಯುತ್ತಿದೆ.