ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 2000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 2000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2,208 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,999 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 19,398 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,41,00,691 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,60,714 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,60,45,500 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,42,704 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.