ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ನಟ ಕಿಶೋರ್ ಪೋಸ್ಟ್
ಬೆಂಗಳೂರು: 'ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು' ಎನ್ನುವ ವೈರಲ್ ವಿಡಿಯೊ ವಾಟ್ಸ್ಆಯಪ್ನಲ್ಲಿ ಹರಿದು ಬಂತು. ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?'ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ನಟ ಕಿಶೋರ್ ಈ ಪೋಸ್ಟ್ ಪ್ರಕಟಿಸಿದ್ದಾರೆ.
ಏನು ಹೇಳಿದ್ದಾರೆ ಕಿಶೋರ್?
ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸ್ಆಯಪ್ನಲ್ಲಿ ಹರಿದು ಬಂತು.
ಆ ಸಿನಿಮಾದ ಭಾಗವಾಗಿ ಈ ರೀತಿಯ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.
ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?
ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.
ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.
ದೈವವೋ, ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ.
ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ... ಎಂದು ಅವರು ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.