ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಕೋಝಿಕ್ಕೋಡ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಬುಧಾಬಿಗೆ ವಾಪಸ್

ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಕೋಝಿಕ್ಕೋಡ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಬುಧಾಬಿಗೆ ವಾಪಸ್

ಕ್ಯಾಲಿಕಟ್: ಅಬುಧಾಬಿಯಿಂದ ಕೋಝಿಕ್ಕೋಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೂಡಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಮತ್ತೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

184 ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿ737-800 ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.

ಟೇಕ್ ಆಫ್ ಆಗಿ 1,000 ಅಡಿ ಎತ್ತರಕ್ಕೆ ಏರಿದ ವೇಳೆ ವಿಮಾನದ ಎಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಲಾಯಿತು ಎಂದು ಏರ್ ಇಂಡಿಯಾ ತಿಳಿಸಿದೆ.