ಕೋಲಾರ ಕ್ಷೇತ್ರದಿಂದ ಸ್ಪರ್ಧೆ ವಿಚಾರ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಕೋಲಾರ ಕ್ಷೇತ್ರದಿಂದ ಸ್ಪರ್ಧೆ ವಿಚಾರ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಕೋಲಾರ ಕ್ಷೇತ್ರದಿಂದ ಸ್ಪರ್ಧೆ ವಿಚಾರದ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೆಚ್ಚು ಒತ್ತಡ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೆಚ್ಚು ಒತ್ತಡ ಇಲ್ಲ. ವರುಣಾ, ಬಾದಾಮಿ ಸೇರಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಡ ಬರುತ್ತಿದೆ. ಚಾಮರಾಜಪೇಟೆಯಲ್ಲೂ ಸ್ಪರ್ಧಿಸುವಂತೆ ಒತ್ತಡ ಬರುತ್ತಿದೆ ಎಂದು ಹೇಳಿದ್ದಾರೆ.

ಈ ಬಾರಿ ಕೋಲಾರದಲ್ಲಿ ಶ್ರೀನಿವಾಸಗೌಡ ಸ್ಪರ್ಧಿಸಲ್ಲ. ಸ್ಪರ್ಧೆ ಮಾಡಿ ಎಂದು ನನಗೆ ಸ್ಥಳೀಯ ನಾಯಕರಿಂದ ಒತ್ತಡ ಬಂದ ಹಿನ್ನೆಲೆಯಲ್ಲಿ ಅಲ್ಲಿ ಪರಿಶೀಲನೆ ಮಾಡಲು ಕೋಲಾರಕ್ಕೆ ಭೇಟಿ ನೀಡಿ, ಎಲ್ಲಿ ಸ್ಪರ್ಧಿಸಬೇಕೆಂದು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.