ಕೋಲಾರ ಜಿಲ್ಲೆಯಾದ್ಯಂತ ಹರಿದಾಡ್ತಿದೆ 'ಸಿದ್ದರಾಮಯ್ಯ ಸೋಲಿಸಿ' ಕರಪತ್ರ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರವನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಹೈಕಮಾಂಡ್ ಒಪ್ಪಿದ್ರೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಇದೀಗ ಸಿದ್ದರಾಮಯ್ಯ ಅವರನ್ನ ಸೋಲಿಸಿ ದಲಿತ ಮುಖ್ಯಮಂತ್ರಿ ಹಾದಿ ಸುಗಮಗೊಳಿಸಿ ಎನ್ನುವ ಕರಪತ್ರ ಕೋಲಾರದಲ್ಲಿ ಹರಿದಾಡುತ್ತಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ಷೇತ್ರದಲ್ಲಿ ದಲಿತ ಮತದಾರರ ಜಾಗೃತಿ ಅಭಿಯಾನ ಆರಂಭವಾಗಿದೆ . ಸಿದ್ದರಾಮಯ್ಯ ವಿರುದ್ಧ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ಸಿದ್ದರಾಮಯ್ಯಗೆ ಭಾರೀ ಸಂಕಷ್ಟ ಎದುರಾದಂತಿದೆ. ಇದರಿಂದ ಕೋಲಾರ ಕ್ಷೇತ್ರದಲ್ಲಿ ಗೆಲುವಿನ ಕನಸು ಕಾಣುತ್ತಿರುವ ಸಿದ್ದರಾಮಯ್ಯಗೆ ಹಿನ್ನಡೆಯಾಗಲಿದ್ಯಾ ಎಂಬ ಪ್ರಶ್ನೆ ಮೂಡಿದೆ.
ಸಿದ್ದರಾಮಯ್ಯರನ್ನು ಸೋಲಿಸುವ ಮೂಲಕ ಸ್ವಾಭಿಮಾನ ಮೆರೆಯೋಣ ಎಂದು ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿದ್ದ ಪರಮೇಶ್ವರ್ ಅವರನ್ನು ಕಳೆದ 2013ರ ಚುನಾವಣೆಯಲ್ಲಿ ಸೋಲಿಸಲಾಗಿತ್ತು, ಇದರ ಹಿಂದೆ ಸಿದ್ದರಾಮಯ್ಯನವರ ಪಾತ್ರ ಇದೆ ಎನ್ನುವ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿಬಂದಿತ್ತು. ಅಲ್ಲದೇ ದಲಿತ ಮುಖ್ಯಮಂತ್ರಿಯಾಗುವುದನ್ನು ಸಿದ್ದರಮಯ್ಯ ತಪ್ಪಿಸಿದರು ಎನ್ನವ ಆರೋಪವಿದೆ. ಈ ಹಿನ್ನೆಲೆ ಇದೀಗ ಸಿದ್ದರಾಮಯ್ಯರನ್ನು ಸೋಲಿಸುವ ಮೂಲಕ ಸ್ವಾಭಿಮಾನ ಮೆರೆಯೋಣ ಎಂದು ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ಮಾಡಲಾಗುತ್ತಿದೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದರು. ಬೆಂಬಲಿಗರ ಒತ್ತಾಸೆಯಂತೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜತೆಗೆ, ಬಾದಾಮಿ ಕ್ಷೇತ್ರದಿಂದಲೂ ಅಭ್ಯರ್ಥಿಯಾಗಲು ಬಯಸಿದ್ದಾರೆ ಎನ್ನಲಾಗಿದೆ. ಆದರೆ, ಎರಡು ಕಡೆ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದ್ಯಾ..? ಎಂಬುದು ಸದ್ಯಕ್ಕಿರುವ ಕುತೂಹಲ.ಹಲವು ಲೆಕ್ಕಾಚಾರ ಮಾಡಿ ಅಳೆದು ತೂಗಿ ಕೊನೆಗೆ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರ. ಬೆಂಬಲಿಗರ ಒತ್ತಾಸೆಯಂತೆ ಕೋಲಾರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗುವ ಅಂತಿಮ ನಿರ್ಧಾರಕ್ಕೆ ಬಂದಿದ್ದರು.