ಕೋಲಾರದಲ್ಲಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರದಲ್ಲಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಎರಡು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಎಂದು ಗುರುತಿಸಲಾಗಿದೆ.

ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರದಲ್ಲಿ ಭೀಕರ ಬೈಕ್ ಅಪಘಾತ : ಇಬ್ಬರು ಸಾವು

ರಾಮನಗರ : ಬೈಕ್ ಅಪಘಾತಗೊಂಡು ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸೂರಪ್ಪನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಗಿರೀಶ್ (22) ಯಶವಂತ್ (23) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಹೆಬ್ಬಳಲು ಗ್ರಾಮದ ಜಾತ್ರೆಗೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.