ಕೋಲಾರದಲ್ಲಿ ಘೋರ ದುರಂತ; ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಹತ್ಯೆ

ಕೋಲಾರದಲ್ಲಿ ಘೋರ ದುರಂತ; ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಹತ್ಯೆ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಘೋರ ಘಟನೆ ನಡೆದಿದೆ. ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.

9 ವರ್ಷದ ಪುತ್ರ ಭುವನ್‌ ಮೃತ ದುರ್ದೈವಿ.ತಂದೆ ಬಾಲಸುಬ್ರಹ್ಮಣ್ಯಂ ಎಂಬಾತನಿಂದ ಈ ಕೃತ್ಯ ನಡೆದಿದೆ.ನಂಗಲಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಆರೋಪಿ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ‌ ಬಂದಿದ್ದನು. ಈಗ ಚಾಕುವಿನಿಂದ ಚುಚ್ಚಿ ಮಗನನ್ನು ಕೊಲೆ ಮಾಡಿದ್ದಾನೆ. ಆರೋಪಿ ಬಾಲಸುಬ್ರಹ್ಮಣ್ಯಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಾಮರಾನಗರದಲ್ಲಿ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ!

ಚಾಮರಾಜನಗರ: ನಗರದ ತಾಲೋಕು ಮೂಡ್ನಾಕೂಡು ಗ್ರಾಮದಲ್ಲಿ ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಪತಿಯ ಅಕ್ರಮ ಸಂಬಂಧ ಶಂಕಿಸಿದ ಎಂ.ಸಿ.ಸೌಮ್ಯ (27) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. 7 ವರ್ಷಗಳ ಹಿಂದೆ ಸೌಮ್ಯಳನ್ನು ವಿವಾಹವಾಗಿದ್ದ ಮಹೇಶ್ ಚಂದ್ರಗುರು ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ತಿಳಿದ ಸೌಮ್ಯಾ, ಪತಿಯನ್ನು ಸಿಟ್ಟಿಗೆದ್ದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡ ಮಹೇಶ್ ಚಂದ್ರಗುರು, ಸೌಮ್ಯಾಳನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ . ಸದ್ಯ ಆರೋಪಿ ಪತಿ ಮಹೇಶ್ ಚಂದ್ರಗುರುವನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ 5 ವರ್ಷದ ಹೆಣ್ಣು ಮಗುವಿದೆ. ಪ್ರಕರಣ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.