ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್- ಇನ್‌ಸೈಡ್ ರಿಪೋರ್ಟ್ ನೋಡಿ

ಬೆಂಗಳೂರು, ಜನವರಿ 13: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವರನ್ನು ಸೋಲಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡುತ್ತಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಇರುವ ದಲಿತ ಮತದಾರರನ್ನು ಒಗ್ಗೂಡಿಸುವ ಸಲುವಾಗಿ ಡಾ.ಬಿ.
'ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಿಂದ ವಿರಾಮ ತೆಗೆದುಕೊಂಡು ಕೋಲಾರದ ನಾಯಕರನ್ನು ಭೇಟಿ ಮಾಡಿ ಕಾರ್ಯತಂತ್ರದ ಕುರಿತು ಚರ್ಚಿಸಲಿದ್ದಾರೆ' ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಹಿಂದ ಮತದಾರರಾದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಮತ್ತು ದಲಿತರನ್ನು ಓಲೈಸಲು ಪಕ್ಷವು ಪ್ರಕಾಶ್ ಅವರನ್ನು ಕಣಕ್ಕಿಳಿಸಲು ಬಯಸುತ್ತದೆ ಎಂದು ಹಿರಿಯ ಜೆಡಿ (ಎಸ್) ನಾಯಕರೊಬ್ಬರು 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
ಜೆಡಿಎಸ್ ನಾಯಕ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಇತ್ತೀಚೆಗೆ ಪ್ರಕಾಶ್ ಅಂಬೇಡ್ಕರ್ ಅವರನ್ನು ಭೇಟಿ ಮಾಡಿದ್ದರು.
ಜನವರಿ 14-15 ರಂದು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯನವರ ಪ್ರಭಾವವನ್ನು ಕಡಿಮೆ ಮಾಡುವ ಮಾರ್ಗೋಪಾಯಗಳನ್ನು ಲೆಕ್ಕಾಚಾರ ಮಾಡುವುದು ಸಭೆಯ ಕಾರ್ಯಸೂಚಿಯಾಗಿದೆ. ಕೋಲಾರ ಅಭ್ಯರ್ಥಿಯಾಗಿ ಒಕ್ಕಲಿಗ ಮುಖಂಡ ಸಿಎಂಆರ್ ಶ್ರೀನಾಥ್ ಅವರನ್ನು ಜೆಡಿಎಸ್ ಈಗಾಗಲೇ ಘೋಷಿಸಿದೆ.
ಕೋಲಾರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಲಿದೆ ಎಂಬ ಊಹಾಪೋಹ ಇತ್ತು. ನಮ್ಮಲ್ಲಿ ಉತ್ತಮ ಅಭ್ಯರ್ಥಿ ಇದ್ದು, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಎಂಎಲ್ಸಿ ಹಾಗೂ ಕೋರ್ ಕಮಿಟಿ ಸಂಚಾಲಕ ಕೆ ಎ ತಿಪ್ಪೇಸ್ವಾಮಿ ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಪಕ್ಷದ ಮುಸ್ಲಿಂ ನಾಯಕರಾಗಿದ್ದಾರೆ. ಅವರು ಮುಸ್ಲಿಮರನ್ನು ಓಲೈಸಲು ಕೋಲಾರದಲ್ಲಿ ಇನ್ನಷ್ಟು ಕೆಲಸ ಮಾಡಲಿದ್ದಾರೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ.
'ಸಿದ್ದರಾಮಯ್ಯನವರ ಪ್ರವೇಶವು ನಮಗೆ ಹೆಚ್ಚು ಸವಾಲಾದರೂ, ಗೆಲ್ಲುವ ವಿಶ್ವಾಸ ನಮಗಿದೆ' ಎಂದು ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಕೋಲಾರದಲ್ಲಿ ಅಹಿಂದ ಯೋಜನೆ ಜಾರಿಯಾಗುವುದಿಲ್ಲ. ಸಿದ್ದರಾಮಯ್ಯ ವರುಣಾಕ್ಕೆ ಹೋಗಲಿ ಎಂದು ವ್ಯಂಗ್ಯವಾಡಿದ್ದಾರೆ.
"ಎಸ್ಸಿಗಳು (ಎಡ) ಸಿದ್ದರಾಮಯ್ಯ ಅವರನ್ನು ಬೆಂಬಲಿಸುವುದಿಲ್ಲ. ಆದರೆ ಕುರುಬ ಮತಗಳು ವಿಭಜನೆಯಾಗುತ್ತವೆ. ಬ್ರಾಹ್ಮಣರು ಮತ್ತು ಶೆಟ್ಟಿಗಳು (ವೈಶ್ಯರು) ಬಿಜೆಪಿಯೊಂದಿಗೆ ಹೋಗುತ್ತಾರೆ. ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಉತ್ತಮ' ಎಂದಿದ್ದಾರೆ.
'ಕೆ ಹೆಚ್ ಮುನಿಯಪ್ಪ ಸೋತ (2019 ರ ಲೋಕಸಭೆ ಚುನಾವಣೆಯಲ್ಲಿ) ಕೋಲಾರ ಕಾಂಗ್ರೆಸ್ ಮುಕ್ತವಾಯಿತು. ಅದು ಈಗ ಮತ್ತೆ ಸಂಭವಿಸುತ್ತದೆ' ಎಂದು ಟೀಕಿಸಿದ್ದಾರೆ.