'ಕೋಲಿ ಸಮಾಜ'ಕ್ಕೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ 'ST' ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು

ಕಲಬುರಗಿ : ಶೀಘ್ರದಲ್ಲೇ 'ಕೋಲಿ ಸಮಾಜ' ಪರಿಶಿಷ್ಟ ಪಂಗಡಕ್ಕೆ ಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ( C.M Basavaraj Bommai ) ಹೇಳಿದರು.
ಕಲಬುರಗಿ ಜಿಲ್ಲೆಯ ಅಪಜಲಾಪುರ ತಾಲೂಕಿನ ಗಾಣಗಾಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಜನರು ತಮ್ಮ ಹಕ್ಕುಗಳನ್ನು ಕೇಳಲು ಪ್ರಾರಂಭಿಸಿದ್ದಾರೆ. 'ಕೋಲಿ ಸಮಾಜ' ವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಇಂದು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಾಹ್ನ 12.05 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 12.45 ಗಂಟೆಗೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರಕ್ಕೆ ಆಗಮಿಸಿದ್ದಾರೆ. ನಂತರ ದೇವಲ ಗಾಣಗಾಪುರದಲ್ಲಿ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.