ಕೋವಿಡ್ ನಂತರ ಭಾರತ ಶೇಕಡ 6 ರಷ್ಟು ಆರ್ಥಿಕ ಮುನ್ನಡೆ

ಕೋವಿಡ್ ನಂತರ ಭಾರತ ಶೇಕಡ 6 ರಷ್ಟು ಆರ್ಥಿಕ ಮುನ್ನಡೆ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಲಿದ್ದಾರೆ. 2ನೇ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡಿಸಿದ್ದಾರೆ. ಕುವೆಂಪು ಕವನದ ಸಾಲು ಓದುತ್ತಾ ಸಿಎಂ ಬಜೆಟ್ ಭಾಷಣ ಶುರು ಮಾಡಿದ್ದಾರೆ.

ಕುವೆಂಪು ಅವರು ನುಡಿದಂತೆ ಹೋಗುತಿದೆ ಹಳೆ ಕಾಲ, ಹೊಸ ಕಾಲ ಬರುತಲಿದೆ. ಬರುತಲಿದೆ ಹೊಸ ದೃಷ್ಟಿ, ಹಳೆಯ ಬಾಳು ಹೋಗುತಲಿದೆ, ಹೊಸ ಬಾಳು ಬರುತಿದೆ. ಹೊಸ ದೃಷ್ಟಿಕೋನದೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ. 25 ವರ್ಷಗಳ ದೃಷ್ಟಿಕೋನದೊಂದಿಗೆ ಬಜೆಟ್ ಮಂಡಿಸುತ್ತಿದ್ದೇನೆ ಎಂದರು.ಕೋವಿಡ್ ನಂತರದ ದಿನಗಳಲ್ಲಿ ಭಾರತ ಆರ್ಥಿಕವಾಗಿ ಪುಟಿದೆದ್ದಿದ್ದು, ಕರ್ನಾಟಕವೂ ಅದೇ ಹಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಪಥದಲ್ಲಿ ಸಾಗುತ್ತಿದ್ದೇವೆ.

ಭಾರತ ಶೇಕಾಡ 6 ರಷ್ಟು ಆರ್ಥಿಕ ಮುನ್ನಡೆ ಸಾಧಿಸಿದೆ. ಈ ಭಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡಲಾಗಿದೆ. ಮೊದಲಿದಿದ್ದು ೩ಲಕ್ಷ ಸಾಲ, ಈ ಬಾರಿ 5ಲಕ್ಷ ರೂಪಾಯಿ ಸಾಲ ಸೌಲಭ್ಯ ನೀಡಲಾಗಿದೆ. 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ ನೀಡಲಾಗಿದೆ.

ಈ ಬಾರಿ ಬಜೆಟ್‌ ನಲ್ಲಿ ಮೀನುಗಾರರಿಗೆ ಬಂಪರ್‌ ಗಿಫ್ಟ್‌ ನೀಡಲಾಗಿದೆ. ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ ನೀಡಲಾಗಿದೆ. ದೋಣಿಗಳಿಗೆ ಮೋಟಾರ್‌ ಇಂಜಿನ್‌ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.