ಕೋವಿಡ್ ಭೀತಿ; ಇಂದು ಕರ್ನಾಟಕ ಸರ್ಕಾರದ ಮಹತ್ವದ ಸಭೆ
ಬೆಂಗಳೂರು: ಚೀನಾದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ಭಾರತದಲ್ಲಿಯೂ ಆತಂಕ ಮೂಡಿಸಿದೆ. ಕೊರೊನಾ ನಿಯಂತ್ರಣಕ್ಕೆ ಭಾರತ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ಕರ್ನಾಟಕ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ಬಳಿಕ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ. ಈ ಮಧ್ಯೆ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಶಾಲೆಗಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ.