ಕೋವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಹೊಣೆಗಾರರಲ್ಲ
ನವದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‌ಗೆ ತಿಳಿಸಿದೆ. ಕೋವಿಡ್ ಲಸಿಕೆಯಿಂದ ಸಾವು ಸಂಭವಿಸಿದರೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಪರಿಹಾರ ಪಡೆಯುವುದೊಂದೇ ಪರಿಹಾರ ಎಂದಿದೆ. ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ಬಳಿಕ ಮೃತಪಟ್ಟ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.