ಖರ್ಗೆ ಅಭಿನಂದನಾ ಸಮಾರಂಭಕ್ಕೆ 3 ಲಕ್ಷ ಜನ: ಈಶ್ವರ ಖಂಡ್ರೆ

ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ತವರು ಜಿಲ್ಲೆಗೆ ಡಿಸೆಂಬರ್ 10ರಂದು ಬರುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅದ್ಧೂರಿ ಅಭಿನಂದನಾ ಸಮಾರಂಭ ಹಾಗೂ ಕಲ್ಯಾಣ ಕ್ರಾಂತಿ ಸಮಾವೇಶವನ್ನು ಆಯೋಜಿಸಲಾಗಿದೆ. 3 ಲಕ್ಷ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.