ಖಾರ್ಕೀವ್: ರಷ್ಯಾ ಪಡೆಗಳ ಕ್ಷಿಪಣಿ ದಾಳಿ; ಕರ್ನಾಟಕದ ವಿದ್ಯಾರ್ಥಿ ಸಾವು

ನವದೆಹಲಿ: ಉಕ್ರೇನ್‌ನ ಖಾರ್ಕೀವ್ ನಗರದ ಬಳಿ ಮಂಗಳವಾರ ಬೆಳಿಗ್ಗೆ ನಡೆದ ರಷ್ಯಾ ಪಡೆಗಳ ದಾಳಿಯಲ್ಲಿ ಭಾರತ ಮೂಲದ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಮೃತ ವಿದ್ಯಾರ್ಥಿ ಕರ್ನಾಟಕ ಮೂಲದ ಹಾವೇರಿ ಜಿಲ್ಲೆಯ ಜಿ.
ಬೆಳಿಗ್ಗೆ ರಷ್ಯಾ ಪಡೆಗಳು ನಡೆಸಿರುವ ದಾಳಿಯಲ್ಲಿ ಈ ವಿದ್ಯಾರ್ಥಿಗೆ ಗುಂಡು ತಗುಲಿ ತೀವ್ರ ಗಾಯಗೊಂಡಿದ್ದ. ನಂತರ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಭಾರತದ ಒಬ್ಬ ವಿದ್ಯಾರ್ಥಿ ಮೃತ ಪಟ್ಟಿರುವುದಾಗಿ ಖಚಿತ ಪಡಿಸಿರುವ ಕೇಂದ್ರ ಸರ್ಕಾರ, ವಿದ್ಯಾರ್ಥಿಯ ವಿವರ ತಿಳಿಸಿಲ್ಲ.
'ಖಾರ್ಕಿವ್‌ನಲ್ಲಿ ಇಂದು ಬೆಳಿಗ್ಗೆ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿಸಿಲು ವಿಷಾದವೆನಿಸುತ್ತಿದೆ. ಸಚಿವಾಲಯವು ವಿದ್ಯಾರ್ಥಿಯ ಕುಟುಂಬದ ಜೊತೆಗೆ ಸಂಪರ್ಕದಲ್ಲಿದೆ. ವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದೇವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
With profound sorrow we confirm that an Indian student lost his life in shelling in Kharkiv this morning. The Ministry is in touch with his family.
— Arindam Bagchi (@MEAIndia) March 1, 2022
We convey our deepest condolences to the family.
ಬೆಳಿಗ್ಗೆ ಹಾರ್ಖಿವ್ ನಗರದಿಂದ ಲೀವ್ ನಗರದತ್ತ ತೆರಳಿ ಅಲ್ಲಿಂದ ರೋಮೆನಿಯಾ ಗಡಿಗೆ ಹೋಗಲು ರೈಲು ನಿಲ್ದಾಣದತ್ತ ಹೊರಟಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಆದರೆ, ಬೆಳಿಗ್ಗೆ ಅಗತ್ಯ ದಿನಸಿ ತರಲು ತೆರಳಿದ್ದ ಸಂದರ್ಭ ರಷ್ಯಾದ ಶೆಲ್ ದಾಳಿಯಲ್ಲಿ ಈ ವಿದ್ಯಾರ್ಥಿ ಅಸುನೀಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
'ಖಾರ್ಕಿವ್ ಮತ್ತು ಇತರ ನಗರಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ತುರ್ತಾಗಿ ಮತ್ತು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಸಹಕರಿಸುವಂತೆ ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳ ಜೊತೆ ವಿದೇಶಾಂಗ ಕಾರ್ಯದರ್ಶಿ ಸಂಪರ್ಕದಲ್ಲಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ನಮ್ಮ ರಾಯಭಾರಿಗಳು ಕ್ಷಿಪ್ರ ಕಾರ್ಯಚರಣೆ ನಡೆಸುತ್ತಿದ್ದಾರೆ' ಎಂದು ಅರಿಂದಮ್ ತಿಳಿಸಿದ್ದಾರೆ.
Foreign Secretary is calling in Ambassadors of Russia and Ukraine to reiterate our demand for urgent safe passage for Indian nationals who are still in Kharkiv and cities in other conflict zones.
— Arindam Bagchi (@MEAIndia) March 1, 2022
Similar action is also being undertaken by our Ambassadors in Russia and Ukraine.
One Indian student shot dead in the #war in #ukraine . Identified as Naveen from Karnataka, his friends said they had left for the train station to leave for Lviv to reach the western border: #indianstudentsinukraine seek Indian embassy help now. #kharkhiv
— Komal Gautham (@komalgauthamTOI) March 1, 2022