ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು
ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ.
ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, ಸುರಹೊನ್ನೆ ಹಳ್ಳಿಗಳ ಮಧ್ಯೆ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ.
ಖಾಸಗಿ ಬಸ್ ಗಳು ಹಿಂದೆ, ಮುಂದೆ ಚಲಿಸುತ್ತಿದ್ದ ಸಂದರ್ಭದಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳೀಯ ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲಾಗಿದೆ.
ತೀವ್ರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.