ಗಡಿ ವಿಚಾರದಲ್ಲಿ `ಮಹಾ' ಸರ್ಕಾರ ಪ್ರಚೋದನೆ ನೀಡುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ : ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ವಿವಾದದ ಬಗ್ಗೆ ಸಿಎಂ ಏಕನಾಥ್ ಶಿಂದೆ ನಿರ್ಣಯ ಮಂಡಿಸಿದ್ದು ಪ್ರಚೋದಿಸಲು. ನಮ್ಮ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು ಬೇರೆ, ಮಹಾರಾಷ್ಟ್ರ ಸರ್ಕಾರ ಮಂಡಿಸಿದ ನಿರ್ಣಯ ಬೇರೆ. ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರದಲ್ಲಿ ಮೊದಲಿನಿಂದಲೂ ಕ್ಯಾತೆ ತೆಗೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ನಿರ್ಣಯವನ್ನು ಮಂಡಿಸಿದ್ದಾರೆ.