ಗಡಿ ವಿವಾದ; ಮಹಾರಾಷ್ಟ್ರಕ್ಕೆ ತೆರಳುವ KSRTC ಬಸ್ಗಳ ಸಂಚಾರ ಸ್ಥಗಿತ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ KSRTC ಬಸ್ ಗಳಿಗೆ ಮಸಿ ಬಳಿದಿದ್ದಾರೆ. ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ KSRTC ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಸಿಎಂ ಏಕನಾಥ್ ಶಿಂಧೆ, ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ.