ಗಡಿ ವಿವಾದ; ಇಂದು ಉಭಯ ರಾಜ್ಯಗಳ ಸಿಎಂಗಳ ಜೊತೆಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದು ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.