ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಗಡಿನಾಡಿನ ಶಿಕ್ಷಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ.ಒದಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 2008 ರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದಿದೆ‌‌.ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ.ನೆರವು ದೊರೆತಿದೆ. ಮೈಸೂರು ವಿವಿಯ ದೊಡ್ಡ ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ. ಹಾವೇರಿ ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕೆ 3 ಕೋಟಿ ರೂ.ಒದಗಿಸಲಾಗುವುದು ಎಂದಿದ್ದಾರೆ.