ಗಡಿನಾಡು ಕನ್ನಡಿಗರ ಅಭಿವೃದ್ಧಿಗೆ ಶೀಘ್ರವೇ 100 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು : ಗಡಿನಾಡ ಕನ್ನಡಿಗರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗಡಿನಾಡ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲ ಸೌಕರ್ಯ ಸೇರಿ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ರ ಮಾರ್ಚ್ 31 ರೊಳಗೆ 100 ಕೋಟಿ ರೂ.
ಗುರುವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಗಡಿನಾಡ ಚೇತನ ಪ್ರಶಸ್ತಿ ಪ್ರಧಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಗಡಿನಾಡ ಕನ್ನಡಿಗರ ಅಭಿವೃದ್ಧಿಗೆ 2023 ರ ಮಾರ್ಚ್ 31 ರೊಳಗೆ 100 ಕೋಟಿ ರೂ. ಬಿಡುಗೆ ಮಾಡುವುದಾಗಿ ಹೇಳಿದ್ದಾರೆ.
ಗಡಿಭಾಗದ ಜನರ ಅಭಿವೃದ್ಧಿಗೆ ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರೂ. ಗಳನ್ನು ಕೊಟ್ಟಿದ್ದೇವೆ. ಈಗ 100 ಕೋಟಿ ರೂ.ಗಳನ್ನು ಕೊಡುತ್ತೇನೆ. ಅದಕ್ಕೆ ಬೇಕಾದ ಯೋಜನೆಯನ್ನು ಗಡಿ ಪ್ರಾಧಿಕಾರದವರು ರೂಪಿಸುವಂತೆ ಸೂಚಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್, ಎಂ.ಎಸ್.ಸಿಂಧೂರ, ಲೀಲಾ ದೇವಿ ಆರ್.ಪ್ರಸಾದ್,ಅಶೋಕ್ ಚಂದರಗಿ ಈ ಉಪಸ್ಥಿತರಿದ್ದರು.