ಹೊಸತಳಿ ಪತ್ತೆ : ಗಡಿಯಲ್ಲಿ ಕಟ್ಟೆಚ್ಚರ

ಹೊಸತಳಿ ಪತ್ತೆ : ಗಡಿಯಲ್ಲಿ ಕಟ್ಟೆಚ್ಚರ

ಬೆಂಗಳೂರು,ಅ.೨೭- ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯೂ.೧
ರೂಪಾಂತರ ತಳಿಯ ಮೊದಲ ಪ್ರಕರಣ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚೆರಿಕೆ ಕ್ರಮವನ್ನು ಕೈಗೊಂಡಿದೆ. ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮಹಾರಾಷ್ಟ್ರದಲ್ಲಿ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾಸ್ಕ್‌ನ್ನು ಕಡ್ಡಾಯಗೊಳಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದರು.
ಕೋವಿಡ್ ಸೋಂಕನ್ನು ತಡೆಯಲು ಜನತೆ ೩ನೇ ಡೋಸ್ ಲಸಿಕೆಯನ್ನು ಆದಷ್ಟು ಬೇಗ ಹಾಕಿಸಿಕೊಳ್ಳುವಂತೆಯೂ ಅವರು ಮನವಿ ಮಾಡಿದರು.