ಗಣರಾಜ್ಯೋತ್ಸವ ಪೆರೇಡ್‌ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ

ಗಣರಾಜ್ಯೋತ್ಸವ ಪೆರೇಡ್‌ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಸಮತಿ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

ಈ ಬಾರಿ ಗಣರಾಜ್ಯೋತ್ಸವ ಪೆರೇಡ್‌ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಸೇರ್ಪಡೆಯಾಗಿದೆ.

14ನೇ ಬಾರಿ ಕರ್ನಾಟಕದ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ.ರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು.ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಕರ್ನಾಟಕದ ನಾರಿಶಕ್ತಿ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಲಾಗಿದೆ.ಈ ಹಿಂದೆ ಕೇಂದ್ರವು ಬೇರೆ ರಾಜ್ಯಗಳಿಗೂ ಅವಕಾಶ ಕೊಡವ ಹಿನ್ನೆಲೆಯಲ್ಲಿ ಕರ್ನಾಟಕ ಈ ಬಾರಿ ಅವಕಾಶಕ್ಕೆ ತಿರಸ್ಕರಿಸಿತ್ತು. ಇದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿತ್ತು.